ಬೆಂಗಳೂರು, 1 ಜನವರಿ(ಹಿ.ಸ):
ಆ್ಯಂಕರ್ :ಇಂದು ನಾಡಿನೆಲ್ಲೆಡೆ ಹೊಸ ವರ್ಷದ ಸಂಭ್ರಮ ಮನೆ ಮಾಡಿದೆ. ಹೀಗಾಗಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು ಭಕ್ತ ಸಾಗರವೇ ಹರಿದು ಬರುತ್ತಿದೆ. ಮುಂಜಾನೆಯೇ ಭಕ್ತಿಯಿಂದ ದೇವಾಲಯಗಳಿಗೆ ಭೇಟಿ ನೀಡಿ ವರ್ಷದ ಮೊದಲ ದಿನವನ್ನು ಜನ ಪ್ರಾರಂಭಿಸುತ್ತಿದ್ದಾರೆ. ಹೊಸ ವರ್ಷಕ್ಕೆ ಮೈಸೂರಿನ ವಿಜಯನಗರ ಲೇಔಟ್ಲ್ಲಿರುವ ಯೋಗಾ ನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತ ಸಾಗರವೇ ಕಂಡು ಬಂದಿದೆ. ಇನ್ನು ಯೋಗಾ ನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಾಡು ವಿತರಣೆ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್
