ಬಳ್ಳಾರಿ, 9 ನವೆಂಬರ್ (ಹಿ.ಸ):
ಆ್ಯಂಕರ್ : ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಕರ್ನಾಟಕ ಸಂಭ್ರಮ-50ರ ರಥಯಾತ್ರೆಯು ಬಳ್ಳಾರಿ ಜಿಲ್ಲೆಯಲ್ಲಿ ನವೆಂಬರ್ 16 ರಿಂದ 24ರವರೆಗೆ ಸಂಚರಿಸಲಿದೆ ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕರ್ನಾಟಕ ಸಂಭ್ರಮ-50ರ ರಥಯಾತ್ರೆ ಸಂಚಾರ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕನ್ನಡಪರ ಸಂಘಟನೆಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ಸಂಭ್ರಮ-50ರ ರಥಯಾತ್ರೆಯು ನವೆಂಬರ್ 16ರಂದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದ ಮೂಲಕ ಪ್ರವೇಶ ಮಾಡಲಿದೆ. ಒಂದು ವಾರಗಳ ಕಾಲ ಜಿಲ್ಲೆಯ 5 ತಾಲ್ಲೂಕುಗಳಲ್ಲಿ ಸಂಚರಿಸಲಿದೆ ಎಂದರು.
ಕರ್ನಾಟಕ ಸಂಭ್ರಮ-50ರ ರಥಯಾತ್ರೆ ಸಂಚಾರ ಹಿನ್ನಲೆಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನ.18ರಿಂದ ಎರಡು ದಿನಗಳ ಕಾಲ ಜಿಲ್ಲಾ ಮಟ್ಟದಲ್ಲಿ ವಿಜೃಂಭಣೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಡಿಸಿ ಮೊಹಮ್ಮದ್ ಝುಬೇರಾ ಅವರು ಹೇಳಿದರು.
ಅಂದು, ಬೆಳಿಗ್ಗೆ ನಗರದ ಸುಧಾಕ್ರಾಸ್ನಿಂದ ರಥಯಾತ್ರೆಗೆ ಅದ್ದೂರಿ ಸ್ವಾಗತ ಮಾಡಲಿದ್ದು, ವಿವಿಧ ಸಾಂಸ್ಕøತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಿಂದ ಭವ್ಯ ಮೆರವಣಿಗೆ ನಡೆಯಲಿದೆ. ನಂತರ ನಗರದ ರಾಘವ ಕಲಾಮಂದಿರದಲ್ಲಿ ವೇದಿಕೆ ಕಾರ್ಯಕ್ರಮ, ಕವಿಗೋಷ್ಠಿ ಸೇರಿದಂತೆ ಕರ್ನಾಟಕ ಏಕೀಕರಣ ಕುರಿತಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು.
ಕರ್ನಾಟಕ ಸಂಭ್ರಮ-50ರ ರಥಯಾತ್ರೆ ಸಂಚಾರ ಅಂಗವಾಗಿ, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ವಿವಿಧ ಕನ್ನಡಪರ ಸಂಘಟನೆಗಳನ್ನೊಳಗೊಂಡಂತೆ 500 ಮೀ. ಉದ್ದದ ಕನ್ನಡ ಬಾವುಟದ ಮೆರವಣಿಗೆ ಆಯೋಜಿಸಲಾಗುತ್ತಿದೆ ಎಂದರು.
ನವೆಂಬರ್ 18ರಂದು ಬಳ್ಳಾರಿ ನಗರ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಸಂಚಾರ, ನವೆಂಬರ್ 20ರಂದು ಕುರುಗೋಡು ತಾಲ್ಲೂಕು, ನವೆಂಬರ್ 22ರಂದು ಕಂಪ್ಲಿ ತಾಲ್ಲೂಕು ಹಾಗೂ ನವೆಂಬರ್ 24ಕ್ಕೆ ಸಿರುಗುಪ್ಪ ತಾಲ್ಲೂಕಿನಲ್ಲಿ ಸಂಚರಿಸಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಅವರು ತಿಳಿಸಿದರು.
