ಇತ್ತೀಚೆಗೆ, ಕರ್ನಾಟಕ ಸರ್ಕಾರವು 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ನಂತರ, 21 ಐಎಎಸ್ ಅಧಿಕಾರಿಗಳನ್ನು ವಿವಿಧ ಇಲಾಖೆಗಳಲ್ಲಿಗೆ ವರ್ಗಾವಣೆ ಮಾಡಿದೆ. ಈ ವರ್ಗಾವಣೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ ಹಲವು ಮಹತ್ವದ ಸ್ಥಾನಗಳ ಬದಲಾವಣೆಗಳನ್ನು ಮಾಡಲಾಗಿದೆ. ಈ ಮೂಲಕ, ಹಲವು ಜಿಲ್ಲೆಗಳಲ್ಲಿ ಮತ್ತು ಇಲಾಖೆಗಳಲ್ಲೂ ಹೊಸ ನೇಮಕಾತಿಗಳನ್ನು ಮಾಡಲಾಗಿದೆ.
BulletsIn
- ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.
- ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
- ಡಾ ರಾಮ್ ಪ್ರಸಾತ್ ಮನೋಹರ್ ವಿ.: ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ, ಬೆಂಗಳೂರು.
- ನಿತೇಶ್ ಪಾಟೀಲ್: ನಿರ್ದೇಶಕರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಇಲಾಖೆ, ಬೆಂಗಳೂರು.
- ಡಾ. ಅರುಂಧತಿ ಚಂದ್ರಶೇಖರ್: ಆಯುಕ್ತೆ ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು.
- ಜ್ಯೋತಿ ಕೆ: ಆಯುಕ್ತೆ ಜವಳಿ ಅಭಿವೃದ್ಧಿ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ, ಬೆಂಗಳೂರು.
- ಶ್ರೀಧರ ಸಿಎನ್: ನಿರ್ದೇಶಕರು, ಸಾಮಾಜಿಕ ಲೆಕ್ಕ ಪರಿಶೋಧನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು.
- ಚಂದ್ರಶೇಖರ ನಾಯಕ ಎಲ್: ಆಯುಕ್ತರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ (ಜಾರಿ), ಬೆಂಗಳೂರು.
- ವಿಜಯ ಮಹಾಂತೇಶ ಬಿ ದಾನಮ್ಮನವರ್: ಉಪ ಆಯುಕ್ತ, ಹಾವೇರಿ ಜಿಲ್ಲೆ.
- ಮೊಹಮ್ಮದ್ ರೋಶನ್: ಉಪ ಆಯುಕ್ತ, ಬೆಳಗಾವಿ ಜಿಲ್ಲೆ.
