ಕೊಟ್ಟೂರು, ಮಾರ್ಚ್ :
ಆ್ಯಂಕರ್ : ಕೊಟ್ಟೂರಿನ ಶ್ರೀ ಗುರುಬಸವೇಶ್ವರ ಸ್ವಾಮಿಯ ರಥೋತ್ಸವವು ವಿಜೃಂಭಣೆಯಿಂದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸೋಮವಾರ ಸಂಜೆ ಅದ್ಧೂರಿಯಾಗಿ ನೆರವೇರಿತು.
ಸಂಜೆ ವೇಳೆಗೆ ರಥ ಬೀದಿಯಲ್ಲಿ ತೇರನ್ನೆಳೆದು ಭಕ್ತರು ಸಂಭ್ರಮಿಸಿದರು. ಕೊಟ್ಟುರೇಶ್ವರ ಮಹಾರಾಜ್ ಕೀ ಜೈ ಎಂದು ಜೈ ಕಾರ ಹಾಕಿದರು. ತೇರು ಮುಂದಕ್ಕೆ ಸಾಗಿದಾಗ ಭಕ್ತರ ಸಂಭ್ರಮ ಮುಗಿಲು ಮುಟ್ಟಿತ್ತು.
ಕೊಟ್ಟೂರಿನ ಶ್ರೀ ಗುರುಬಸವೇಶ್ವರ ಸ್ವಾಮಿಯ ರಥೋತ್ಸವದ ಪ್ರಯುಕ್ತ ಪ್ರತಿ ವರ್ಷವೂ ಸುಮಾರು ಲಕ್ಷಗಟ್ಟಲೇ ಜನರು ಸೇರುವುದು, ವಿಶೇಷವಾಗಿ ರಾಜ್ಯದ ಬೇರೆ ಬೇರೆ ಭಾಗಗಳಿಂದ ಪಾದಯಾತ್ರೆ ಮೂಲಕ ಭಕ್ತರು ಜಾತ್ರೆಗೆ ಆಗಮಿಸುವುದು ಇಲ್ಲಿನ ವಿಶೇಷತೆಯಾಗಿದೆ.
ಮಹಾ ರಥೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಕೊಟ್ಟೂರಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಹೆಚ್. ಗಂಗಾಧರಪ್ಪ ಮತ್ತು ಕೊಟ್ಟೂರಿನ ದೇವಸ್ಥಾನದ ಪ್ರಧಾನ ಧರ್ಮಕರ್ತರಾದ ಸಿ.ಎಚ್.ಎಂ.ಗಂಗಾಧರ ಸೇರಿದಂತೆ ಇತರರು ಇದ್ದರು.
