ಕೊಪ್ಪಳ, 29 ಫೆಬ್ರವರಿ :
ಆ್ಯಂಕರ್: ಮಾರ್ಚ್ 03 ರಂದು ನಡೆಯಲಿರುವ 2024-25 ನೇ ಸಾಲಿನ 6ನೇ ತರಗತಿ ದಾಖಲಾತಿಗಾಗಿ ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆಯನ್ನು ಸುಗಮ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ 1973 ರ ಕಲಂ 144 ರನ್ವಯ ನಿμÉೀಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಮುನಿರಾಬಾದ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ 6ನೇ ತರಗತಿ ದಾಖಲಾತಿಗಾಗಿ ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆಯು ಮಾರ್ಚ್ 3 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಜಿಲ್ಲೆಯ ಗಂಗಾವತಿ ತಾಲ್ಲೂಕಿನ 3, ಯಲಬುರ್ಗಾ ತಾಲ್ಲೂಕಿನಾ 5, ಕುಷ್ಟಗಿ ತಾಲ್ಲೂಕಿನ 07 ಹಾಗೂ ಕೊಪ್ಪಳ ತಾಲ್ಲೂಕಿನ 5 ಪರೀಕ್ಷಾ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಹಾಗೂ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ಷರತ್ತಿಗೆ ಒಳಪಟ್ಟು ನಿμÉೀಧಾಜ್ಞೆ ಜಾರಿಗೊಳಿಸಲಾಗಿದೆ.
ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿμÉೀಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿμÉೀಧಿಸಲಾಗಿದೆ.
ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿಬರ್ಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿμÉೀಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
