ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕೋಲಾರ ಜಿಲ್ಲೆಯ ಅಲ್ಪಸಂಖ್ಯಾತರ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ, ಕೋಲಾರ (ಸಿಬಿಎಸ್ಇ) ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೋಲಾರ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬಾಳಸಂದ್ರ ಮುಳಬಾಗಿಲು ತಾಲ್ಲೂಕು ಶಾಲೆಗಳಲ್ಲಿ ೬ನೇ ತರಗತಿಗೆ ದಾಖಲಾತಿಗಳು ಪ್ರಾರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಲಿಂಕ್ https:evasindhuservices. karnataka.gov.in/ ಮೂಲಕ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಬಹುದು. ವಿದ್ಯಾರ್ಥಿಗಳು ರಾಜ್ಯದ ನಿವಾಸಿಯಾಗಿರಬೇಕು, ಕುಟುಂಬದ ವಾರ್ಷಿಕ ವರಮಾನವು ರೂ.೨.೫೦ ಲಕ್ಷಗಳಿಗೆ ಮೀರಬಾರದು, ಶಾಲೆಗಳಲ್ಲಿ ಮತೀಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶೇ.೭೫ ರಷ್ಟು (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಭೌಧ್ದ ಮತ್ತು ಪಾರ್ಸಿ) ಹಾಗೂ ಶೇ.೨೫ ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಾತಿ ಮತ್ತು ಪ್ರತಿ ತರಗತಿಯಲ್ಲಿ ಹೆಣ್ಣು ಮಕ್ಕಳಿಗೆ ಶೇ.೫೦% ಮೀಸಲಿರಿಸಲಾಗಿದೆ, ಪಠ್ಯಪುಸ್ತಕ, ಸಮವಸ್ತç, ವಸತಿ ಮತ್ತು ಲೇಖನ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ, ಕೋಲಾರ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೋಲಾರ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬಾಳಸಂದ್ರ ಮುಳಬಾಗಿಲು ಮತ್ತು ಜಿಲ್ಲಾ-ತಾಲ್ಲೂಕು ಮಾಹಿತಿ ಕೇಂದ್ರಗಳು ಹಾಗೂ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನೆಲ ಮಹಡಿ, ಮೌಲಾನಾ ಆಜಾದ್ ಭವನ, ಶ್ರೀ ದೇವರಾಜ್ ಅರಸು ಬಡಾವಣೆ, ೨ನೇ ಬ್ಲಾಕ್, ಟಮಕ ವಾರ್ಡ್ ನಂ.೧, ಕೋಲಾರ ದೂರವಾಣಿ : ೦೮೧೫೨-೨೯೫೨೫೭, ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ, ಕೋಲಾರ: ೯೬೮೬೭೯೯೧೬೫/೯೬೧೧೦೭೭೫೩೦ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮುಳಬಾಗಿಲು: ೯೦೧೯೪೪೦೪೮೪/೭೮೯೨೮೫೯೫೯೯ ರವರನ್ನು ಸಂರ್ಪಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ
