ಬೆಂಗಳೂರು, 5 ಫೆಬ್ರವರಿ :
ಆ್ಯಂಕರ್ :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಅಶ್ವಮೇಧ ಕ್ಲಾಸಿಕ್ ಪ್ರಯಾಣದ ಮರುಕಲ್ಪನೆ ಪಾಯಿಂಟ್-ಟು-ಪಾಯಿಂಟ್ ಎಕ್ಸ್ಪ್ರೆಸ್, ೧೦೦ ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸುಗಳ ಲೋಕಾರ್ಪಣೆ ಕಾರ್ಯಕ್ರಮ ಇಂದು ಬೆಳಿಗ್ಗೆ ವಿಧಾನಸೌಧದ ಪೂರ್ವದ್ವಾರದಲ್ಲಿ ನಿಗದಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಪ್ರಯಾಣಿಕರಿಗೆ ಕೈಗೆಟುಕುವ ದರದಲ್ಲಿ ಸುಖಕರ ಪ್ರಯಾಣದ ಅನುಭವ ಒದಗಿಸುವುದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಅಶ್ವಮೇಧ ನಮ್ಮ ಇನ್ನೊಂದು ವಿನೂತನ ಪ್ರಯತ್ನವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
