ಬೆಂಗಳೂರು, 23 ಫೆಬ್ರವರಿ :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾರೋಗ್ಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನವನ್ನು ಒಂದು ದಿನ ವಿಸ್ತರಣೆ ಮಾಡಲಾಗಿದೆ. ಸಭಾಧ್ಯಕ್ಷ ಯು.ಟಿ. ಖಾದರ್ ನೇತೃತ್ವದಲ್ಲಿ ಇಂದು (ಫೆ.23) ವಿಧಾನಸಭೆ ಕಾರ್ಯ ಕಲಾಪ ಸಲಹಾ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಸೋಮವಾರ (ಫೆ.26) ಒಂದು ದಿನಕ್ಕೆ ವಿಧಾನಸಭೆ ಕಲಾಪ ನಡೆಸುವ ಮತ್ತು ಮಂಗಳವಾರ (ಫೆ.27) ರಾಜ್ಯಸಭಾ ಚುನಾವಣೆ ನಡೆಸುವ ನಿರ್ಣಯ ಕೈಗೊಳ್ಳಲಾಗಿದೆ. ಹೀಗಾಗಿ ಅಂದು ಕಲಾಪ ನಡೆಯುವುದಿಲ್ಲ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.26 ರಂದು ಬೆಳಗ್ಗೆ 9:30ಕ್ಕೆ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ಸಭೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಸೇರಿದಂತೆ ಇತರೆ ಬಿಎಸಿ ಸದಸ್ಯರು ಭಾಗಿಯಾಗಿದ್ದರು.
