ಮಹಾತ್ಮಾ ಗಾಂಧೀಜಿಯ ಅಧ್ಯಕ್ಷತೆಯ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ೧೦೦ ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಶತಮಾನೋತ್ಸವ ಸಂಭ್ರಮಾಚರಣೆಗಳನ್ನು ಇಂದು ಮತ್ತು ನಾಳೆ ಹಮ್ಮಿಕೊಳ್ಳಲಾಗಿದೆ.
BulletsIn
- 1924ರ ಅಧಿವೇಶನದ ದಾಖಲೆಗಳನ್ನು ಸಂಗ್ರಹಿಸಿ, ಅದನ್ನು ಪುಸ್ತಕವಾಗಿ ಬಿಡುಗಡೆ ಮಾಡಲಾಗುವುದು.
- ಇಂದು ಬೆಳಗ್ಗೆ 10 ಗಂಟೆಗೆ ವೀರ ಸೌಧದಲ್ಲಿ ಗಾಂಧೀಜಿಯ ಪುತ್ಥಳಿ ಅನಾವರಣ ನಡೆಯಲಿದೆ.
- ಗಾಂಧೀಜಿಯ ಪುತ್ಥಳಿ ಅನಾವರಣದೊಂದಿಗೆ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು.
- ಬೆಳಗ್ಗೆ 10.45ಕ್ಕೆ ಖಾದಿ ಮೇಳ ಉದ್ಘಾಟನೆ ನಡೆಯಲಿದೆ.
- 11.15ಕ್ಕೆ ಗಂಗಾಧರ ದೇಶಪಾಂಡೆ ಅವರ ಸ್ಮಾರಕವನ್ನು ಮುಖ್ಯಮಂತ್ರಿಗಳಿಂದ ಅನಾವರಣಗೊಳ್ಳಲಿದೆ.
- ಗಂಗಾಧರ ದೇಶಪಾಂಡೆ ಅವರ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು.
- ಮಧ್ಯಾಹ್ನ 3 ಗಂಟೆಗೆ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ.
- ಸಂಜೆ 7 ಗಂಟೆಗೆ ಎಐಸಿಸಿ ಅಧ್ಯಕ್ಷರಿಂದ ಭೋಜನಕೂಟ ಏರ್ಪಡಿಸಲಾಗುವುದು.
- 27ರಂದು ಬೆಳಗ್ಗೆ 10.30ಕ್ಕೆ ಸುವರ್ಣಸೌಧದಲ್ಲಿ ಗಾಂಧೀಜಿ ಪ್ರತಿಮೆಯನ್ನು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅನಾವರಣಗೊಳಿಸಲಿದ್ದಾರೆ.
- ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ, ಸಭಾಧ್ಯಕ್ಷರಾದ ಯು.ಟಿ ಖಾದರ್ ಮತ್ತು ಬಸವರಾಜ ಹೊರಟ್ಟಿ ಅವರ ಮುನ್ನಡೆದಲ್ಲಿ ನಡೆಯಲಿದೆ.
