ಮೈಸೂರು, 27 ಮಾರ್ಚ್
ಆ್ಯಂಕರ್ :ಲೋಕಸಭೆ ಚುನಾವಣೆ ದಿನಾಂಕ ನಿಗದಿಯಾಗುತ್ತಿದ್ದಂತೆ ಪ್ರಚಾರದ ಕಾವು ಜೋರಾಗಿದೆ. ಅದರಂತೆ ಇಂದು (ಮಾ.27) ಬುಧವಾರ ಸಿದ್ದರಾಮಯ್ಯನವರ ತವರು ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ನೀಡಲಿದ್ದು, ಬೆಳಗ್ಗೆಯಿಂದ ಸಂಜೆಯವರೆಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜೊತೆ ಹಲವು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಕಾರ್ಯಕ್ರಮಗಳ ವಿವರ ಇಲ್ಲಿದೆ
ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಬಿ ವೈ ವಿಜಯೇಂದ್ರ ಅವರು ಬೆಳಿಗ್ಗೆ 8 ಗಂಟೆಗೆ ಯದುವೀರ್ ಜೊತೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು, ಅಲ್ಲಿಂದ ಬೆಳಿಗ್ಗೆ 10 ಗಂಟೆಗೆ ಕುಶಾಲನಗರಕ್ಕೆ ಪ್ರಯಾಣ ಬೆಳಸಲಿದ್ದಾರೆ. ನಂತರ 10.30ಕ್ಕೆ ಮಡಿಕೇರಿಯಲ್ಲಿ ಯದುವೀರ್ ಜೊತೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.ಮಧ್ಯಾಹ್ನ 11ಕ್ಕೆ ಮಡಿಕೇರಿಯಲ್ಲಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೋಳ್ಳಲಿರುವ ಅವರು, ಸಂಜೆ 4 ಗಂಟೆಗೆ ಮೈಸೂರು ಸದರನ್ ಸ್ಟಾರ್ ಹೋಟೆಲ್ನಲ್ಲಿ ಬಿಜೆಪಿ-ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ತದನಂತರ ಸಂಜೆ 5ಕ್ಕೆ ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಹಮ್ಮಿಕೊಂಡಿರುವ ಬಿಜೆಪಿ-ಜೆಡಿಎಸ್ ಸಮ್ಮಿಲನ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ.
