2024ರ ಲೋಕಸಭಾ ಚುನಾವಣೆ ಸಂಬಂಧ ಬಿಜೆಪಿ ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಇಂದು ಸಂಜೆ ಪ್ರಕಟಿಸುವ ಸಾಧ್ಯತೆಯಿದೆ. ಈ ಸಂಬಂಧ ದೆಹಲಿಯಲ್ಲಿ ಬಿಜೆಪಿ ಸಿಇಸಿ ಸಭೆ ನಡೆಯಲಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿ ಕೇಂದ್ರ ಚುನಾವಣಾ ಸಮಿತಿ ನಾಯಕರು ಪಟ್ಟಿ ಅಂತಿಮಗೊಳಿಸಲಿದ್ದಾರೆ. ಜೊತೆಗೆ ಕರ್ನಾಟಕದ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡುವ ವಿಚಾರವಾಗಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಮತ್ತೆ ಬುಲಾವ್ ಕಳಿಸಿದೆ.
ಸಂಜೆ ದೆಹಲಿಯಲ್ಲಿ ಬಿಜೆಪಿ ಸಿಇಸಿ ಸಭೆ ನಡೆಯಲಿದ್ದು ಅದಕ್ಕೂ ಮುನ್ನ ರಾಜ್ಯ ನಾಯಕರ ಜೊತೆ ಮೂರನೇ ಸುತ್ತಿನ ಚರ್ಚೆ ನಡೆಸುವುದು ಹೈಕಮಾಂಡ್ ಉದ್ದೇಶವಾಗಿದೆ. ಇಂದಿನ ಸಭೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಭೆ ಭಾಗಿಯಾಗಿ ಎರಡನೇ ಪಟ್ಟಿಯನಲ್ಲಿ ರಾಜ್ಯದ 10 ರಿಂದ 15 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸುವ ಸಾಧ್ಯತೆಗಳಿವೆ.
