ಬೆಂಗಳೂರು,
ಆ್ಯಂಕರ್: ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬೆಂಗಳೂರು ಮೂಲದ ಇಬ್ಬರನ್ನು ಶನಿವಾರ (ಮಾ.23) ಸಂಜೆ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಇಬ್ಬರು ಬಾಂಬರ್ ಜೊತೆ ನೇರ ಸಂಪರ್ಕದಲ್ಲಿದ್ದರು ಎಂಬುವುದು ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಅಧಿಕಾರಿಗಳು ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ.
