
ಬೆಂಗಳೂರು, 28 ಜನವರಿ:
ಆ್ಯಂಕರ್:
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 64ನೇ ಹುಟ್ಟು ಹಬ್ಬ ಆಚರಿಸುಕೊಳ್ಳಲಿದ್ದಾರೆ. ಅಲ್ಲದೆ, ಗಂಗಮ್ಮ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಶಿಗ್ಗಾವಿ, ಸವಣೂರು, ಹಾವೇರಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಹುಟ್ಟು ಹಬ್ಬದ ಅಂಗವಾಗಿ ಅನೇಕ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಲಿದ್ದಾರೆ.
ಜನ್ಮದಿನದ ಪ್ರಯುಕ್ತ ಶಿಗ್ಗಾವಿ ಹಾಗೂ ಸವಣೂರಿನಲ್ಲಿ ಈಗಾಗಲೇ ಐ ಕ್ಯಾಂಪ್, ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ ಕಾರ್ಯಕ್ರಮ ನೆರವೇರಿಸಲಾಗಿದೆ. ಅಲ್ಲದೇ ತಮ್ಮ ಟ್ರಸ್ಟ್ ವತಿಯಿಂದ 250 ವಿದ್ಯಾರ್ಥಿಗಳಿಗೆ ತಲಾ 5000 ಶಿಷ್ಯವೇತನ ನೀಡಿದ್ದಾರೆ
