
ಬೆಂಗಳೂರು, 5 ಫೆಬ್ರವರಿ :
ಆ್ಯಂಕರ್ : ಕೇಂದ್ರದಿಂದ ಕರ್ನಾಟಕಕ್ಕೆ ಬರಬೇಕಾದ ಅನುದಾನ, ತೆರಿಗೆ ಹಣ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಿನ ಆರೋಪ-ಪ್ರತ್ಯಾರೋಪಗಳು ತಾರಕಕ್ಕೆರಿದ್ದು,ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರೋಪಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅಂಕಿ-ಸಂಖ್ಯೆ ಸಮೇತ ತಿರುಗೇಟು ನೀಡಿದ್ದಾರೆ.
15ನೇ ಹಣಕಾಸು ಆಯೋಗದಲ್ಲಿ ಕಳೆದ ಮೂರು ವರ್ಷಗಳಲ್ಲಿ ರಾಜ್ಯಕ್ಕೆ ಈಗಾಗಲೇ ರೂ. 13,985 ಕೋಟಿ ರೂ. ಬಿಡುಗಡೆಯಾಗಿದ್ದು, ಈ ವರ್ಷ ಇನ್ನೂ ಸುಮಾರು 3,500 ಕೋಟಿ ರೂ. ಅನುದಾನ ರಾಜ್ಯ ಸರ್ಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಇನ್ನು ಇದೇ ಅನುದಾನದ ವಿಚಾರವಾಗಿ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ. ಯುಪಿಎ ಸರ್ಕಾರದ ಇದ್ದಾಗ ತೆರಿಗೆ ಪರಿಹಾರ 81,785 ಕೋಟಿ ರೂ. ಇತ್ತು. ಎನ್ಡಿಎ ಅವಧಿಯಲ್ಲಿ 2.90 ಲಕ್ಷ ಕೋಟಿ ರೂ. ತೆರಿಗೆ ಪರಿಹಾರ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹಳೆಯ ಚಾಳಿ ಬಿಟ್ಟಿಲ್ಲ. ವೈಫಲ್ಯ ಮುಚ್ಚಿಕೊಳ್ಳುವ ಸಲುವಾಗಿ ಕೇಂದ್ರದ ಕಡೆ ಬೊಟ್ಟು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
