ಬಳ್ಳಾರಿ, 20 ಫೆಬ್ರವರಿ
ಆ್ಯಂಕರ್ : ಬಳ್ಳಾರಿ ವಲಯದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಚಂದ್ರಶೇಖರ್ ನಾಯಕ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ.
ಇವರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಗ್ರಾಮದವರಾಗಿದ್ದಾರೆ. ಈ ಹಿಂದೆ ಚಾಮರಾಜನಗರ ವಲಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ನಿಕಟಪೂರ್ವ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಟಿ.ಹೀರಲಾಲ್ ಅವರು ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ಚಂದ್ರಶೇಖರ್ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ಆದೇಶಿಸಿದೆ ಎಂದು ತಿಳಿಸಿದೆ.
