ಮಂಗಳೂರು,17 ಫೆಬ್ರವರಿ :
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಫೆಬ್ರವರಿ 17 ಮಂಗಳೂರಿನಲ್ಲಿ ಎರಡೂ ಕಾರ್ಯಕ್ರಮಗಳಲ್ಲಿ ಭಾವಹಿಸಲಿದ್ದು, ಈ ಕಾರ್ಯಕ್ರಮಗಳಲ್ಲಿ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ವಾಮಂಜೂರಿನ ತಿರುವೈಲ್ ನಲ್ಲಿ ಕಂಬಳದಲ್ಲಿ ಕಾರ್ಯಕ್ರಮ ಹಾಗೂ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಎರಡೂ ಕಾರ್ಯಕ್ರಮಗಳಲ್ಲಿ ಡ್ರೋಣ್ ಹಾರಾಟ ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಆದೇಶ
ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿರುವೈಲ್ ನಲ್ಲಿ ನಡೆಯುವ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಸಂಜೆ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಈ ಎರಡೂ ಕಾರ್ಯಕ್ರಮಗಳಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ.
