ಬೆಂಗಳೂರು, 5 ಫೆಬ್ರವರಿ :
ಆ್ಯಂಕರ್ :ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ, ಕನ್ನಡಿಗರು ನಡೆಸ್ತಿರೋ ನನ್ನ ತೆರಿಗೆ ನನ್ನ ಹಕ್ಕು ಟ್ವಿಟರ್ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಬೆಂಬಲ ಸೂಚಿಸಿದ್ದಾರೆ. ಕಳೆದ ಒಂದು ವಾರದಿಂದ ಈ ಕ್ಯಾಂಪೇನ್ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ನಲ್ಲಿದ್ದು, ಪರ-ವಿರೋಧಗಳ ಕುರಿತು ಭಾರೀ ಚರ್ಚೆ ಆಗ್ತಿದೆ.
ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ, ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ. ಶ್ರಮದಿಂದ ಸದೃಢ ರಾಷ್ಟ್ರ ಕಟ್ಟುತ್ತಿರುವ ಕರ್ನಾಟಕವೇ ಭಾರತಕ್ಕೆ ಮಾಡೆಲ್. ನ್ಯಾಯಕ್ಕಾಗಿ ಧ್ವನಿಯೆತ್ತಿರುವ ನಾಡಿನ ಪ್ರಜ್ಞಾವಂತರಿಗೆ ನನ್ನ ಧನ್ಯವಾದಗಳು. ನಿಮ್ಮ ಜೊತೆ ನಾನಿದ್ದೇನೆ, ನಮ್ಮೆಲ್ಲರ ಧ್ವನಿ ಒಟ್ಟಾದರೆ ದಿಲ್ಲಿವರೆಗೆ ಕೇಳುವುದು ಶತಸಿದ್ಧ ಎಂದು ಟ್ವೀಟ್ ಮಾಡಿ ಬೆಂಬಲಿಸಿದ್ದಾರೆ.
ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ #ನನ್ನತೆರಿಗೆನನ್ನಹಕ್ಕು ಟ್ವಿಟ್ಟರ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ. ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ.
