ಬೆಂಗಳೂರು, 27 ಫೆಬ್ರವರಿ :ಆ್ಯಂಕರ್:
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಗ್ರಾಮಾಂತರ ಹಾಗೂ ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಬೆಳಗ್ಗೆ ವಿಪರೀತ ಬಿಸಿಲು ರಾತ್ರಿ ವೇಳೆ ಚಳಿ ಬೀಳುತ್ತಿದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ ಎ ಎಲ್ ನಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
