ಬೆಂಗಳೂರು,30ಜನವರಿ(ಹಿ.ಸ):
ಆ್ಯಂಕರ್ :ಕರ್ನಾಟಕದಾದ್ಯಂತ ಈ ವಾರಪೂರ್ತಿ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ ಶೀತಗಾಳಿ ಬೀಸುತ್ತಿದೆ. ವಿಜಯಪುರದಲ್ಲಿ 11.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
