ಹೊಸಪೇಟೆ,
ಆ್ಯಂಕರ್ : ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರು ಮಾರ್ಚ 26ರಂದು ಗ್ರಾಮೀಣ ಪ್ರದೇಶದಲ್ಲಿ ಸಂಚಾರ ನಡೆಸಿ ಲೋಕಸಭಾ ಚುನಾವಣೆ-2024ರ ಸಿದ್ಧತೆಯನ್ನು ಪರಿಶೀಲಿಸಿದ್ದಾರೆ.
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಆಲೂರ ಚೆಕ್ಪೋಸ್ಟಗೆ ತೆರಳಿ ಅಲ್ಲಿನ ಸ್ಥಿತಿಗತಿಯನ್ನು ಪರಿಶೀಲಿಸಿದರು. ಚೆಕ್ಪೋಸ್ಟಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಯ ಹಾಜರಾತಿ, ಶ್ಯಾಮಿಯಾನ್, ಕುಡಿಯುವ ನೀರು ಸೇರಿದಂತೆ ಚೆಕ್ಪೋಸ್ಟಗಳಲ್ಲಿನ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು.
ಚೆಕ್ಪೋಸ್ಟಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ಚೆಕ್ಪೋಸ್ಟಗೆ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾದ ಸಮಯಕ್ಕೆ ಪಾಳಿ ಅನುಸಾರ ಹಾಜರಾಗಿ ಕಾರ್ಯ ನಿರ್ವಹಿಸಬೇಕು. ಪ್ರತಿಯೊಂದು ವಾಹನವನ್ನು ತಪಾಸಣೆಗೊಳಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
