ಚಿಕ್ಕಮಗಳೂರು, 3 ಮಾರ್ಚ್ :
ಚಿಕ್ಕಮಗಳೂರು ನಗರದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಗ್ಯಾರಂಟಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಜಿಲ್ಲಾಡಳಿತದಿಂದ ಸಂಪೂರ್ಣ ಸಿದ್ಧತೆ ಹಾಗೂ ತಯಾರಿ ನಡೆದಿದೆ. ಮತ್ತೊಂದೆಡೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಘಟನೆ ನಡೆದ ಹಿನ್ನೆಲೆ ಗ್ಯಾರಂಟಿ ಸಮಾವೇಶಕ್ಕೆ ಭಾರೀ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಚಿಕ್ಕಮಗಳೂರು ನಗರದಾದ್ಯಂತ ಪೊಲೀಸ್ ಹೈಅಲರ್ಟ್ ಆಗಿದೆ.
ನಗರದ ಸುಭಾಷ್ಚಂದ್ರ ಬೋಸ್ ಆಟದ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ನೇತೃತ್ವದಲ್ಲಿ ಗ್ಯಾರಂಟಿ ಸಮಾವೇಶ ನಡೆಯುವ ಸ್ಥಳ ಹಾಗೂ ಸುತ್ತಮುತ್ತಲೂ ತಪಾಸಣೆ ನಡೆಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕೆಜೆ ಜಾರ್ಜ್ ಭಾಗಿಯಾಗಲಿದ್ದಾರೆ.
ಹೆಲಿಕಾಪ್ಟರ್ ಮೂಲಕ 11 ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕೆಜೆ ಜಾರ್ಜ್ ಗ್ಯಾರಂಟಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ 5 ಕ್ಷೇತ್ರಗಳ ಫಲಾನುಭವಿಗಳು ಕೂಡ ಭಾಗಿಯಾಗಲಿದ್ದಾರೆ .
