ನವದೆಹಲಿ, 7 ಫೆಬ್ರವರಿ :
ಆ್ಯಂಕರ್ : ಕೇಂದ್ರ ಸರ್ಕಾರದಿಂದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ನಾಡಗೀತೆ ಹಾಡುವ ಮೂಲಕ ಹೋರಾಟ ಪ್ರಾರಂಭಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು ಧರಣಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಹೆಚ್.ಕೆ ಪಾಟೀಲ್, ಕೆ.ಹೆಚ್ ಮುನಿಯಪ್ಪ, ಹೆಚ್.ಸಿ ಮಹದೇವಪ್ಪ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಸೇರಿದಂತೆ ಸರ್ಕಾರದ ಎಲ್ಲ ಸಚಿವರು ಹಾಗೂ ಶಾಸಕರು ಭಾಗಿಯಾಗಿದ್ದಾರೆ.
