ಮೈಸೂರು,18 ಅಕ್ಟೋಬರ್ :
ಆ್ಯಂಕರ್ :
ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2023ಕ್ಕೆ ಚಾಲನೆ ದೊರೆತಿದೆ. ಅರಮನೆ ನಗರಿಯಲ್ಲಿ ಸಂಭ್ರಮ ಮನೆ ಮಾಡಿದ್ದು, ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಈಗಾಗಲೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿದೆ. ಅಕ್ಟೋಬರ್ 24ರ ವಿಜಯದಶಮಿಯಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ದಸರಾ ಉತ್ಸವವನ್ನು ವೀಕ್ಷಿಸಲು ದೇಶ, ವಿದೇಶಗಳಿಂದ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗಾಗಿ ಗೋಲ್ಡ್ ಕಾರ್ಡ್ ಸೌಲಭ್ಯವನ್ನು ಜಿಲ್ಲಾಡಳಿತ ಇಂದು (ಅ.18) ರಂದು ಬೆಳಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಿದೆ.
