ಬೆಂಗಳೂರು, 3 ಮಾರ್ಚ್:
ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ, ಕಲಬುರ್ಗಿಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ಮಂಡ್ಯದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದೆ.
ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 15.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
