ಕೋಲಾರ, ೧೯ ಅಕ್ಟೋಬರ್ :
ಆ್ಯಂಕರ್ : ವಿಶೇಷಚೇತನರಿಗಾಗಿ ಸರ್ಕಾರದ ವತಿಯಿಂದ ಲಭ್ಯವಿರುವ ಸೌಲಭ್ಯ ಮತ್ತುಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಸದರಿ ಯೋಜನೆಗಳನ್ನು ವಿಶೇಷಚೇತನರು ಹಾಗೂ ಅವರ ಪೋಷಕರು ಆರೈಕೆದಾರರಿಗೆ ಕೋಲಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸುನೀಲ್ ಎಸ್ ಹೊಸಮನಿ ತಿಳಿಸಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಕಲಚೇತನ ಸಂಘ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ಅಂತರಗ0ಗೆ ರಸ್ತೆ ಅಂತರಗ0ಗಾ ವಿದ್ಯಾ ಸಂಸ್ಥೆಯಲ್ಲಿ ಆರೈಕೆದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮುನಿರಾಜಪ್ಪ, ಇಲಾಖೆಯ ವತಿಯಿಂದ ಲಭ್ಯವಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಅವುಗಳ ಸದುಪಯೋಗಕ್ಕಾಗಿ ಮನವಿ ಮಾಡಿದರು.
ಡಾ.ಕೆ.ಎಸ್.ಶಂಕರ್ ಮತ್ತು ಮೇಘರಾಜ್ ವಿಕಲಚೇತನರಿಗೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವ ಹಾಗೂ ಅಂಗವಿಕಲರಿಗೆ ಪ್ರತ್ಯೇಕ ಮೀಸಲಾತಿಯನ್ನು ಚುನಾವಣಾ ಸ್ಪರ್ಧೆಗೆ ನೀಡಲು ಕೋರಿದರು ಹಾಗೂ ಸರ್ಕಾರಕ್ಕೆ ಮನವಿ ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ-ನಿರ್ದೇಶಕ ಎನ್.ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಶ್ರೀನಾಥ್, ಹಿರಿಯ ವಕೀಲ ಧನರಾಜ್, ಮುಳಬಾಗಿಲು ಸಾರ್ಕ್ ಸಂಸ್ಥೆಯ ಮುಖ್ಯಸ್ಥರಾದ ಮೇಘರಾಜ್, ಅಂತರಗ0ಗಾ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಡಾ.ಕೆ.ಎಸ್.ಶಂಕರ್ ಇದ್ದರು.
ಚಿತ್ರ : ಕೋಲಾರ ಅಂತರ0ಗಾ ವಿದ್ಯಾಸಂಸ್ಥೆಯಲ್ಲಿ ನಡೆದ ವಿಶೇಷ ಚೇತನ ಆರೈಕೆದಾರರ ದಿನಾಚರಣೆ ಯನ್ನು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ್ ಎಸ್. ಹೊಸಮನಿ ಉದ್ಘಾಟಿಸಿದರು.
