ಮೈಸೂರು, 6 ಫೆಬ್ರವರಿ :
ಆ್ಯಂಕರ್ : ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ನೀರನ್ನು ನವೆಂಬರ್ ನಿಂದ ಪೂರೈಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು, ಇದರಿಂದ ಶಾಲೆಗಳಲ್ಲಿ ಮುಕ್ತವಾಗಿ ಎಲ್ಲಾ ವ್ಯವಸ್ಥೆ ಬಳಸಿಕೊಳ್ಳಬಹುದು. ಎಷ್ಟೋ ಶಾಲೆಗಳಿಗೆ ವಿದ್ಯುತ್ ಬಿಲ್ ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.
ಉಚಿತವಾಗಿ ವಿದ್ಯುತ್ ಹಾಗೂ ನೀರು ನೀಡಿದರೆ ಎಲ್ಲಾ ಸರ್ಕಾರಿ ಶಾಲೆಗಳಿಗೆ ಅನುಕೂಲವಾಗಲಿದೆ. ಎಷ್ಟೋ ಶಾಲೆಗಳು ವಿದ್ಯುತ್ ಬಿಲ್ ಗೆ ಹೆದರಿ ಕಂಪ್ಯೂಟರ್ ಬಳಸುತ್ತಿಲ್ಲ. ಇದೀಗ ಇದೆಲ್ಲಕ್ಕೂ ಸಹಾಯವಾಗಲಿದೆ. ಇನ್ನು ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯ ಹಾಲಿನಲ್ಲಿ ರಾಗಿ ಮಾಲ್ಟ್ ಕೊಡುತ್ತೇವೆ ಎಂದು ಮಾಹಿತಿ ನೀಡಿದರು.
