
ಬೆಂಗಳೂರು, 29 ಜನವರಿ:
ಆ್ಯಂಕರ್ :ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲೂ ಹನುಮ ಧ್ವಜ ಹಾಕಿ ಸಂಭ್ರಮಿಸಲಾಗಿತ್ತು. ಅದೇ ಧ್ವಜವೀಗ ಇವತ್ತು ದೊಡ್ಡ ಕೋಲಾಹಲವನ್ನ ಎಬ್ಬಿಸಿದೆ. ಜಿಲ್ಲಾಡಳಿತ ಧ್ವಜ ತೆರವು ಮಾಡಿದ್ದಕ್ಕೆ ಆಕ್ರೋಶ ಭುಗಿಲೆದ್ದಿದೆ. ಸದ್ಯ ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ಇಂದು ರಾಜ್ಯಾದ್ಯಂತ ಪ್ರತಿಭಟನೆಗೆ ವಿಪಕ್ಷನಾಯಕ ಆರ್. ಅಶೋಕ್ ಕರೆ ನೀಡಿದ್ದಾರೆ. ಇಂದಿನ ಪ್ರತಿಭಟನೆಯಲ್ಲಿ ಜೆಡಿಎಸ್ ಸಹ ಭಾಗಿಯಾಗುತ್ತೆ. ಸರ್ಕಾರದ ಹಿಂದೂ ವಿರೋಧಿ ನೀತಿ, ದುರಾಡಳಿತ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಆರ್. ಅಶೋಕ್ ಹೇಳಿದ್ದಾರೆ.
