ಬೆಂಗಳೂರು, 18 ಫೆಬ್ರವರಿ :
ಆ್ಯಂಕರ್:ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ. ಅನಾರೋಗ್ಯದಿಂದ 4 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು.
ದೇವೇಗೌಡರಿಗೆ ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿದ್ದು, ಸದ್ಯ ಅವರು ಚೇತರಿಸಿಕೊಂಡಿದ್ದರಿಂದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
