ಮಂಡ್ಯ, 9 ಫೆಬ್ರವರಿ :
ಆ್ಯಂಕರ್ : ಹನುಮ ಧ್ವಜವನ್ನು ತೆರವುಗೊಳಿಸಿದ್ದನ್ನು ಖಂಡಿಸಿ ಹಿಂದೂ ಸಂಘಟನೆಗಳು ಕರೆ ನೀಡಿದ ಕೆರಗೋಡು ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಂದ್ ಗೆ ವರ್ತಕರು, ಹೊಟೇಲ್ ಮಾಲೀಕರು ಬೆಂಬಲ ವ್ಯಕ್ತಪಡಿಸಿದ ಪರಿಣಾಮ ಅಂಗಡಿ, ಹೊಟೇಲುಗಳು ಮುಚ್ಚಿವೆ. ಕೆರಗೋಡಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಗ್ರಾಮಕ್ಕೆ ಹಿರಿಯ ಪೊಲೀಸ್ ಅಧಿಕಾರಿ ತಿಮ್ಮಯ್ಯ ಭೇಟಿ ನೀಡಿ ಭದ್ರತೆ ಪರಿಶೀಲಿಸಿ ಸಿಬ್ಬಂದಿಗೆ ಕೆಲ ಸೂಚನೆ ನೀಡಿದ್ದಾರೆ.
ಹನುಮ ಧ್ವಜ ತೆರವು ಮಾಡುವಲ್ಲಿ ಶಾಸಕರ ಪಾತ್ರ ಇದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ (ಗಾಣಿಗ) ಮನೆಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಶಾಸಕ ರವಿಕುಮಾರ್ ಫ್ಲೆಕ್ಸ್ ಹರಿದು ಕೆರಗೋಡು ಗ್ರಾಮಸ್ಥರು ಕಿಡಿಕಾರಿದ್ದರು. ಹೀಗಾಗಿ ಮಂಡ್ಯದ ಬಂದೀಗೌಡ ಬಡಾವಣೆಯಲ್ಲಿರುವ ರವಿಕುಮಾರ್ ಗೌಡ (ಗಾಣಿಗ) ನಿವಾಸಕ್ಕೆ 10 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
