• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಕನಕಗಿರಿ ಉತ್ಸವ-2024: ಪೂರ್ವಸಿದ್ಧತಾ ಪರಿಶೀಲನಾ ಸಭೆ
Regional

ಕನಕಗಿರಿ ಉತ್ಸವ-2024: ಪೂರ್ವಸಿದ್ಧತಾ ಪರಿಶೀಲನಾ ಸಭೆ

CliQ INDIA
Last updated: February 16, 2024 11:08 am
CliQ INDIA
Share
3 Min Read
SHARE
 ಕನಕಗಿರಿ ಉತ್ಸವ-2024: ಪೂರ್ವಸಿದ್ಧತಾ ಪರಿಶೀಲನಾ ಸಭೆ
 ಕನಕಗಿರಿ ಉತ್ಸವ-2024: ಪೂರ್ವಸಿದ್ಧತಾ ಪರಿಶೀಲನಾ ಸಭೆ
 ಕನಕಗಿರಿ ಉತ್ಸವ-2024: ಪೂರ್ವಸಿದ್ಧತಾ ಪರಿಶೀಲನಾ ಸಭೆ

ಕೊಪ್ಪಳ, 15 ಫೆಬ್ರವರಿ :

ಆ್ಯಂಕರ್: ಕನಕಗಿರಿ ಉತ್ಸವ-2024 ಅನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಇದರ ಅಂಗವಾಗಿ ಅಚ್ಚುಕಟ್ಟು ನಿರ್ವಹಣೆಗೆ ಸಮಿತಿಗಳನ್ನು ರಚಿಸಿ ಕಾರ್ಯ ಹಂಚಿಕೆ ಮಾಡಲಾಗಿದೆ. ಅಧಿಕಾರಿಗಳು ತಮಗೆ ಹಂಚಿಕೆ ಮಾಡಿದ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಕನಕಗಿರಿ ಉತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿಗಳು ಹಾಗೂ ಕನಕಗಿರಿ ಉತ್ಸವ ಸಮಿತಿಯ ಅಧ್ಯಕ್ಷರಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನಕಗಿರಿ ಉತ್ಸವ-2024 ರ ಅಂಗವಾಗಿ ಆಯೋಜಿಸಲಾಗಿದ್ದ ಪೂರ್ವಸಿದ್ಧತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನಕಗಿರಿ ಉತ್ಸವದ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಹೆಚ್ಚಿನ ಆಸಕ್ತಿ ವಹಿಸಿದ್ದು, ಸಮಿತಿಗಳು ತಮಗೆ ಹಂಚಿಕೆ ಮಾಡಿದ ಕಾರ್ಯಗಳ ಕುರಿತು ಒಂದು ನಿರ್ದಿಷ್ಟ ಯೋಜನೆಯನ್ನು ರಚಿಸಿ, ಅದನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಬೇಕು. ಉತ್ಸವ ಕುರಿತ ಎಲ್ಲ ಕಾರ್ಯಗಳ ಬಗ್ಗೆ ಸಚಿವರಿಗೆ ಮಾಹಿತಿ ಇರಬೇಕು. ಕೊನೆ ಹಂತದಲ್ಲಿ ಯಾವುದೇ ಬದಲಾವಣೆ ಅಥವಾ ಗೊಂದಲಕ್ಕೆ ಅವಕಾಶವಿರಬಾರದು. ಆದ್ದರಿಂದ ಸಮಿತಿಯಲ್ಲಿನ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳು ಸೂಚಿಸಿದರು.

ಉತ್ಸವದ ಅಂಗವಾಗಿ ಮೆರವಣಿಗೆ, ಸೈಕಲ್ ಜಾಥಾ, ಮ್ಯಾರಾಥಾನ್ ಆಯೋಜಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲು ಅನುಕೂಲವಾಗುವಂತೆ ಉತ್ಸವದ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಎರಡು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ದೇಸೀ ಕ್ರೀಡೆಗಳು, ಸ್ಥಳೀಯ ಸಾಂಪ್ರದಾಯಿಕ ಕ್ರೀಡೆಗಳಿಗೆ ಅವಕಾಶ ನೀಡಬೇಕು. ಕಲಾತಂಡಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು.

ಕಲಾತಂಡಗಳ ಸಂಭಾವನೆ, ಕಲಾತಂಡಗಳ ಸಂಖ್ಯೆ, ಕಲಾವಿದರ ವಸತಿ, ಊಟದ ವ್ಯವಸ್ಥೆಗೆ ಅಗತ್ಯ ರೀತಿಯಲ್ಲಿ ಕ್ರಮ ವಹಿಸಬೇಕು. ಉತ್ಸವದ ಉದ್ಘಾಟನಾ ಅಂಗವಾಗಿ ಮೆರವಣಿಗೆಯನ್ನು ಆಯೋಜಿಸಬೇಕು. ಕನಕಗಿರಿಯಲ್ಲಿ ಹೆಚ್ಚಿನ ಸ್ಥಳಾವಕಾಶವಿರುವ, ದೊಡ್ಡ ರಸ್ತೆಗಳಲ್ಲಿ ಮೆರವಣಿಗೆ ಆಯೋಜಿಸಬೇಕು. ಮೆರವಣಿಗೆಯಲ್ಲಿ ಕಲಾತಂಡಗಳು, ಸಾರ್ವಜನಿಕರು ಭಾಗವಹಿಸುವುದರಿಂದ ಹೆಚ್ಚಿನ ಸ್ಥಳಾವಕಾಶವಿರುವ ರಸ್ತೆಗಳನ್ನು ಗುರುತಿಸಿ ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಉತ್ಸವದಲ್ಲಿ ಅಂದಾಜು 2 ಲಕ್ಷದವರೆಗೆ ಜನರು ಭಾಗವಹಿಸುವ ಸಾಧ್ಯತೆ ಇದ್ದು, ಭಾಗವಹಿಸುವ ಕಲಾವಿದರು, ಅಧಿಕಾರಿಗಳು, ಸಾರ್ವಜನಿಕರಿಗೆ ಅಚ್ಚುಕಟ್ಟು ಊಟದ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರಿ ಹಾಗೂ ಖಾಸಗಿ ವಾಹನಗಳಿಗೆ ಸೂಕ್ತ ರೀತಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಕನಕಗಿರಿಯಲ್ಲಿ ಇರುವ ಮತ್ತು ಕನಕಗಿರಿಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಪರಿಶೀಲಿಸಿ, ದುರಸ್ತಿ ಇರುವ ಕಡೆಯಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಿ.

ಉತ್ಸವದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು. ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಠಾಚಾರ ಪಾಲಿಸಬೇಕು. ಜಿಲ್ಲೆಯ ಯುನೆಸ್ಕೋ ಪಾರಂಪರಿಕ ತಾಣಗಳು, ಕರಡಿ ಧಾಮ, ಕೊಪ್ಪಳ ಕೋಟೆ, ಇಟಗಿಯ ಮಹದೇವ ದೇವಾಲಯ ಸೇರಿದಂತೆ ಪ್ರಮುಖ ಸ್ಮಾರಕಗಳು, ಶಿಷ್ಠಾಚಾರದಂತೆ ಲೋಗೋಗಳನ್ನು ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇನ್ನು ಎರಡು ದಿನಗಳಲ್ಲಿ ಎಲ್ಲ ಸಮಿತಿಗಳು ತಮ್ಮ ಹಂತದಲ್ಲಿ ಚರ್ಚಿಸಿ, ವ್ಯವಸ್ಥಿತ ಯೋಜನೆಯ ವರದಿಯನ್ನು ಸಲ್ಲಿಸಬೇಕು. ಉತ್ಸವದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಒದಗಿಸಬೇಕು. ಸಮಿತಿಯಲ್ಲಿ ಅಗತ್ಯವಿದ್ದರೆ ತಮ್ಮ ಅಧೀನ ಸಿಬ್ಬಂದಿ ಅಥವಾ ಅಧಿಕಾರಿಗಳನ್ನು ಸೇರ್ಪಡೆಗೊಳಿಸಿಕೊಂಡು ಉತ್ಸವದಲ್ಲಿ ಯಾವುದೇ ಕೊರತೆ, ಗೊಂದಲ, ಅನನುಕೂಲವಾಗದಂತೆ ಎಚ್ಚರ ವಹಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಸಹಾಯಕ ಆಯುಕ್ತರಾದ ಕ್ಯಾ.ಮಹೇಶ್ ಮಾಲಗಿತ್ತಿ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ, ತೋಟಗಾರಿಕೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಸೇರಿದಂತೆ ಎಲ್ಲ ಸಮಿತಿಗಳ ಅಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು ಉಪಸ್ಥಿತರಿದ್ದರು.

You Might Also Like

ಇಂದು ನಾಳೆ ಉಡುಪಿ ಜಿಲ್ಲೆಗೆ ಕೆಂಪು ಎಚ್ಚರಿಕೆ
ಕನೇರಿ ಸ್ವಾಮೀಜಿ ಪರ ಆಂದೋಲ ಸಿದ್ಧಲಿಂಗ ಸ್ವಾಮೀಜಿ ವಕಾಲತ್ತು
ಇ-ಶ್ರಮ್  ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ | BulletsIn
ಕುಡತಿನಿ : ಸೆ.17 ರಂದು ಪರಿಸರ ಸಾರ್ವಜನಿಕ ಆಲಿಕೆ ಸಭೆ
ವಿಶ್ವ ವಿಕಲಚೇತನರ ದಿನಾಚರಣೆ ; ಪೂರ್ವಭಾವಿ ಸಭೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಚುನಾವಣಾ ಬಾಂಡ್ ಸಂವಿಧಾನ ಬಾಹೀರ, ರದ್ದು ಮಾಡಬೇಕು
Next Article ಐಸಿಯುನಲ್ಲಿ ಬಂಗಾಳದ ಬಿಜೆಪಿ ನಾಯಕ ಸುಕಾಂತ ಮಜುಂದಾರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?