• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಕೋಲಾರ ಜಿಲ್ಲಾಡಳಿತ ಸಜ್ಜು
Regional

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಕೋಲಾರ ಜಿಲ್ಲಾಡಳಿತ ಸಜ್ಜು

CliQ INDIA
Last updated: April 26, 2024 2:37 pm
CliQ INDIA
Share
4 Min Read
SHARE

ಕೋಲಾರ

ಆ್ಯಂಕರ್ : ಹದಿನೆಂಟನೇ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಶುಕ್ರವಾರ ಬೆಳಿಗ್ಗೆ ೭.೦೦ ಗಂಟೆಯಿ0ದ ಸಂಜೆ ೬.೦೦ ಗಂಟೆಯ ತನಕ ನಡೆಯಲಿದೆ. ಇದಕ್ಕೂ ಮೊದಲು ಮತಗಟ್ಟೆಯಲ್ಲಿ ಮತಗಟ್ಟೆ ಏಜೆಂಟುಗಳ ಸಮ್ಮುಖದಲ್ಲಿ ಅಣಕು ಮತದಾನ ನಡೆಯಲಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಕೋಲಾರ ಜಿಲ್ಲಾ ಜಿಲ್ಲಾಡಳಿತ ಸಜ್ಜುಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಪುರುಷರು ಹಾಗೂ ಮಹಿಳೆಯರೂ ಸೇರುದಂತೆ ಒಟ್ಟು ೧೭,೨೬,೯೧೪ ಮಂದಿ ಮತದಾರರು ಏಪ್ರಿಲ್ ೨೬ ರಂದು ಶುಕ್ರವಾರ ಮತ ಚಲಾವಣೆ ಮಾಡಲಿದ್ದಾರೆ.

ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿದರು. ಒಟ್ಟು ೮,೫೩,೮೨೯ ಮಂದಿ ಪುರುಷರು, ೮,೭೨,೮೭೪ ಮಂದಿ ಮಹಿಳೆಯರು, ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ. ಕಳೆದ ೨೦೧೯ನೇ ಸಾಲಿಗೆ ಹೋಲಿಸಿದರೆ ೯೮,೧೩೨ ಮತದಾರರ ಸಂಖ್ಯೆ ಹೆಚ್ಚಿದೆ. ಜಿಲ್ಲೆಯಲ್ಲಿ ಪುರುಷರಿಗಿಂತ ಮಹಿಳೆಯರ ಸಂಖ್ಯೆ ಅಧಿಕವಾಗಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಾಗ ಕಾಲೇಜುಗಳು ಮತ್ತು ಮಹಿಳಾ ಪ್ರಥಮ ದರ್ಜೆ ಕಾಲೇಜುಗಳಿಗೆ ಸಿಬ್ಬಂದಿ ತೆರಳಿ ವ್ಯಾಪಕ ಪ್ರಚಾರ ನಡೆಸಲಾಯಿತು ಹಾಗೂ ಒಟ್ಟು ೪೯,೧೯೫ ಯುವ ಮತದಾರರ ನೋಂದಣಿಯನ್ನು ಮಾಡುಸಲಾಗಿದೆ. ಅದರಲ್ಲೂ ವಿವಾಹವಾಗಿ ಒಂದು ಕ್ಷೇತ್ರದಿಂದ ಮತ್ತೊಂದು ಕ್ಷೇತ್ರಕ್ಕೆ ವಲಸೆಯಾದ ಎಲ್ಲಾ ಹೆಣ್ಣು ಮಕ್ಕಳ ಹೆಸರನ್ನು ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಾಗು ಸೇರ್ಪಡೆ ಮಾಡಲಾಗಿದೆ. ಇದರಿಂದ ಮಹಿಳಾ ಮತದಾರರ ಸಂಖ್ಯೆ ಅಧಿಕವಾಗಿರುವುದು ಕಂಡು ಬರುತ್ತಿದೆ ಎಂದರು.

೮೫ ವರ್ಷ ಮೇಲ್ಪಟ್ಟ ೧೬,೯೩೯ ಮಂದಿ ಹಿರಿಯ ನಾಗರೀಕರು ಹಾಗೂ ೨೧,೪೮೧ ಮಂದಿ ವಿಶೇಷ ಚೇತನರು ಸೇರ್ಪಡೆಯಾಗಿದ್ದಾರೆ. ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ೨,೦೬೦ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಆ ಪೈಕಿ ಏಳು ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು ೪೪೧ ಸೂಕ್ಷ್ಮ ಮತಗಟ್ಟೆಗಳು ಹಾಗೂ ೬೧ ದುರ್ಬಲ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು ೧,೨೩೧ ಮತಗಟ್ಟೆಗಳಲ್ಲಿ ವೆಬ್ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದರಿಂದಾಗಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿರುವ ನಿಯಂತ್ರಣ ಕೊಠಡಿಗೆ ಮಾಹಿತಿ ನೇರವಾಗಿ ರವಾನೆಯಾಗಲಿದೆ. ಎಲ್ಲಾ ಮತಗಟ್ಟೆಗಳಲ್ಲಿ ಶೇಕಡವಾರು ಮತದಾನದ ಬಗ್ಗೆ ಮಾಹಿತಿ ಒದಗಿಸಲು ಪ್ರತ್ಯೇಕ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಮಾಹಿತಿ ಒದಗಿಸಲು ಮೊಬೈಲ್ನಲ್ಲಿ ಪ್ರತ್ಯೇಕ ಆಪ್ ಒದಗಿಸಲಾಗಿದ್ದು, ಶೇಕಡವಾರು ಮತದಾನದ ಬಗ್ಗೆ ಮಾಹಿತಿಯನ್ನು ನಿಯಂತ್ರಣ ಕೊಠಡಿಗೆ ಅಪ್ಲೋಡ್ ಮಾಡಲಾಗುವುದು. ಈ ಹಿಂದೆ ಶೇಕಡವಾರು ಮತದಾನ ವಿವರಗಳನ್ನು ಪಡೆಯಲು ನಿಯಂತ್ರಣ ಕೊಠಡಿಯನ್ನು ಅವಲಂಭಿಸಬೇಕಾಗಿತ್ತು. ಮಾಧ್ಯಮಗಳಿಗೆ ಪ್ರತಿ ಎರಡು ಗಂಟೆಗಳಿಗೊಮ್ಮೆ ಮತದಾನದ ವಿವರಗಳನ್ನು ಒದಗಿಸುವುದಾಗಿ ಚುನಾವಣಾಧಿಕಾರಿಗಳು ತಿಳಿಸಿದರು.

ಮತಗಟ್ಟೆಗಳ ಭದ್ರತೆಗಾಗಿ ಕೇಂದ್ರ ಮೀಸಲು ಪಡೆಗಳು ಗೃಹ ರಕ್ಷಕದಳ, ನಾಗರೀಕ ಪೊಲೀಸರು ಸೇರಿದಂತೆ ಒಟ್ಟು ೧,೬೪೦ ಮಂದಿ ಸಿವಿಲ್ ಪೊಲೀಸರು, ೮೮೪ ಮಂದಿ ಗೃಹ ರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಮಹಿಳಾ ಸಿಬ್ಬಂದಿ ಕಾರ್ಯನಿರ್ವಹಿಸುವ ಮತಗಟ್ಟೆಗಳಿಗೆ ಇಬ್ಬರು ಮಹಿಳೆಯರನ್ನು ನಿಯೋಜಿಸಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಹಾಗೂ ಶಾಮಿಯಾನ ಹಾಕಿ ನೆರಳು ಮಾಡಲಾಗಿದೆ. ಮತಗಟ್ಟೆಗೆ ಬರುವ ಮತದಾರರಿಗೆ ಮತಗಟ್ಟೆಯಲ್ಲಿರುವ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ. ಮತದಾರರ ಸಂಖ್ಯೆಯ ಚೀಟಿಯನ್ನು ಒದಗಿಸಲಾಗುವುದು. ನಿರಂತರವಾಗಿ ತಾಪಮಾನ ಏರಿಕೆಯಾಗುತ್ತಿರುವ ಕಾರಣ ಪ್ರತಿ ಮತಗಟ್ಟೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ತುರ್ತು ಚಿಕಿತ್ಸೆಗಾಗಿ ಮೆಡಿಕಲ್ ಕಿಟ್ಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಒಟ್ಟು ೭,೩೯೨ ಮಂದಿ ಸಿಬ್ಬಂದಿಯನ್ನು ಮತದಾನಕ್ಕೆ ನಿಯೋಜಿಸಲಾಗಿದೆ. ಒಟ್ಟು ೧,೮೪೮ ಮಂದಿ ಮತಗಟ್ಟೆ ಅಧಿಕಾರಿಗಳು, ಒಟ್ಟು ೧,೮೪೮ ಸಹಾಯಕ ಮತಗಟ್ಟೆ ಅಧಿಕಾರಿಗಳು ಹಾಗೂ ಒಟ್ಟು ೩,೬೯೬ ಮಂದಿ ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಟ್ಟು ೩,೯೮೦ ಮಂದಿ ಮಹಿಳಾ ಸಿಬ್ಬಂದಿ ಹಾಗೂ ಒಟ್ಟು ೩,೪೦೦ ಮಂದಿ ಪುರುಷ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಟ್ಟು ೫೦೮ ಮಂದಿ ಮೈಕ್ರೋ ವೀಕ್ಷರುಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಮತಗಟ್ಟೆಗಳಿಗೆ ಸಿಬ್ಬಂದಿಯನ್ನು ನಿಯೋಜನೆ ಮಾಡಲು ಒಟ್ಟು ೨೧೯ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಹಾಗೂ ೬೩ ಸರ್ಕಾರಿ ಬಸ್ಸುಗಳನ್ನು ಒದಗಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ ಎಲ್ಲಾ ಬಸ್ಸುಗಳಿಗೆ ಜಿ.ಪಿ.ಎಸ್ ಅಳವಡಿಸಲಾಗಿದೆ. ಸೆಕ್ಟೆರ್ ಅಧಿಕಾರಿಗಳಿಗೆ ಖಾಸಗಿ ವಾಹನಗಳನ್ನು ಒದಗಿಸಲಾಗಿದೆ. ಮತಗಟ್ಟೆಗಳ ಸಿಬ್ಬಂದಿ ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಹಾಗೂ ಮತದಾನದ ದಿನದಂದು ಊಟ ಮತ್ತು ತಿಂಡಿ ವ್ಯವಸ್ಥೆ ಮಾಡಲಾಗಿದೆ. ಮತದಾನ ಮುಗಿದ ನಂತರ ಎಲ್ಲಾ ಇ.ವಿ.ಎಂ. ಯಂತ್ರಗಳನ್ನು ಸಾಗಾಣಿಕೆ ಮಾಡಲು ಕೋಲಾರದಲ್ಲಿರುವ ಕೌಂಟಿAಗ್ ಕೇಂದ್ರಕ್ಕೆ ಜಿ.ಪಿ.ಎಸ್ ಸಂಪರ್ಕವಿರುವ ಕಂಟೈನರ್ಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಶಿಡ್ಲಘಟ್ಟದ ಸರ್ಕಾರಿ ಪ್ರೌಢಶಾಲೆಯ ಚಿಂತಾಮಣಿಯ ಸರ್ಕಾರಿ ಪಾಲಿಟೆಕ್ನಿಕ್, ಶ್ರೀನಿವಾಸಪುರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆ.ಜಿ.ಎಫ್ನ ಸರ್ಕಾರಿ ಸ್ಕೂಲ್ಆಪ್ಮೈನ್ಸ್, ಬಂಗಾರಪೇಟೆಯ ಆದರ್ಶ ಶಾಲೆ, ಕೋಲಾರದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಮಾಲೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ಸ್ಥಳಗಳಿಂದ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಶಂಕರ್ ವಣಿಕ್ಯಾಳ್, ಚುನಾವಣಾ ತಹಶೀಲ್ದಾರ ಶೀರೀನ್ ತಾಜ್, ನಾಗವೇಣಿ ಹಾಗೂ ಮಂಜು ಭಾರ್ಗವಿಸೇರುದಂತೆ ಚುನಾವಣಾ ಶಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಚಿತ್ರ : ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋಲಾರ ಲೋಕಸಭಾ ಚುನಾವಣಾಧಿಕಾರಿ ಅಕ್ರಂ ಪಾಷ ಚುನಾವಣೆಯ

You Might Also Like

ಗುರುವಾರದ ರಾಶಿ ಫಲ – Hindusthan Samachar Kannada
ಅಧಿವೇಶನದಲ್ಲಿ ಸಮಸ್ಯೆಗಳಿಗೆ ಪರಿಹಾರ ಭರವಸೆ ಇಲ್ಲ : ಬಿ.ವೈ. ವಿಜಯೇಂದ್ರ | BulletsIn
ರಾಜ್ಯ ರಾಜಕೀಯದಲ್ಲಿ ಏನೂ ಬದಲಾವಣೆ ಆಗಲ್ಲ | BulletsIn
ಬ್ಯಾಗ್‌ನಲ್ಲಿ 41 ಲಕ್ಷ ನಗದು ಪತ್ತೆ: ಎಸ್ಪಿ ನಿಂಬರಗಿ
ಆರ್ಯ ವೈಶ್ಯ ಸಮುದಾಯಕ್ಕೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
Next Article ಹೆಚ್ಚಿನ ಸಂಖ್ಯೆಯ ಮತದಾನಕ್ಕೆ ಪ್ರಧಾನಿ ಮೋದಿ ಕರೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?