ಬೆಂಗಳೂರು, ಫೆಬ್ರವರಿ :
ಆ್ಯಂಕರ್ : ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಕಾನೂನ ಕ್ರಮ ಕೈಗೊಳ್ಳಲಾಗುವುದು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ನಿನ್ನೆ ಕೂಡ ಎಸ್.ಟಿ.ಸೋಮಶೇಖರ್ ತಮಗೆ ಕರೆ ಮಾಡಿ ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದು ಹೇಳಿದ್ದರು.
ಈಗ ಅಡ್ಡಮತದಾನ ಮಾಡಿದ್ದಾರೆ. ಶಿವರಾಮ ಹೆಬ್ಬಾರ್ ಏನು ಮಾಡುತ್ತಾರೆ ಗೊತ್ತಿಲ್ಲ. ಕಳೆದ 4 ತಿಂಗಳಿನಿಂದ ಈ ಇಬ್ಬರು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಜೊತೆ ತಿರುಗಾಡುತಿದ್ದರು. ವಿಧಾನಸಭಾ ಚುನಾವಣೆ ನಡೆದು 9 ತಿಂಗಳಾಗಿಲ್ಲ. ಆಗಲೇ ಪಕ್ಷಾಂತರ ಮಾಡುವುದನ್ನು ಜನ ಕ್ಷಮಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
