ಮಂಗಳೂರು-ತಿರುವನಂತಪುರ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಇದೇ ೧೨ರಂದು ಬೆಳಿಗ್ಗೆ ೮ ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ವಂದೇ ಭಾರತ್ ರೈಲನ್ನು ತಿರುವನಂತಪುರವರೆಗೆ ವಿಸ್ತರಿಸುವಂತೆ ಮನವಿ ಮಾಡಲಾಗಿತ್ತು. ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ವಂದೇ ಭಾರತ್ ರೈಲು ಇನ್ನು ಮುಂದೆ ಮಂಗಳೂರು-ತಿರುವನಂತಪುರ ನಡುವೆ ಬುಧವಾರ ಹೊರತುಪಡಿಸಿ ವಾರದ ಆರು ದಿನಗಳು ಸಂಚರಿಸಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
