ಮಂಗಳೂರು ,
ಆ್ಯಂಕರ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ (ಏ.14)ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಈ ವೇಳೆ ಬೃಹತ್ ರೋಡ್ಶೋ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿರುವ ಹಿನ್ನೆಲೆ ಮಂಗಳೂರು ನಗರಾದ್ಯಂತ ಹಲವು ಭಾಗಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಮಧ್ಯಾಹ್ನ 2 ಗಂಟೆಯಿಂದ ರೋಡ್ ಶೋ ನಡೆಯಲಿದ್ದು, ಮುಗಿಯುವವರೆಗೂ ವಾಹನ ಸಂಚಾರ ನಿಷೇಧಿಸಿ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.
ಎಲ್ಲೆಲ್ಲಿ ವಾಹನ ಸಂಚಾರ ನಿಷೇಧ?
ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್ ಬಾಗ್, ಬಲ್ಲಾಳ್ ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ ಹಂಪನಕಟ್ಟೆವರೆಗೆ ವಾಹನಗಳ ಸಂಚಾರ ನಿಷೇಧವಿರುತ್ತದೆ. ಕಾರ್ ಸ್ಟ್ರೀಟ್ – ಕುದ್ರೋಳಿ – ಕೂಳೂರು ಫೆರ್ರಿ ರಸ್ತೆ ಕಡೆಯಿಂದ ಅಡ್ಡ ರಸ್ತೆ ಮೂಲಕ ಎಂ.ಜಿ ರಸ್ತೆ ಪ್ರವೇಶಿಸುವ ಎಲ್ಲಾ ವಾಹನಗಳಿಗೆ ಸಂಚಾರ ನಿಷೇಧಿಸಲಾಗಿದೆ.
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋನಲ್ಲಿ ಬದಲಾವಣೆ; ಸ್ಥಳ, ಸಮಯದ ಮಾಹಿತಿ ಇಲ್ಲಿದೆ
ಕೆಎಸ್ಆರ್ಟಿಸಿ, ಶ್ರೀದೇವಿ ಕಾಲೇಜು ರಸ್ತೆ, ಕೊಡಿಯಾಲ್ ಗುತ್ತು ರಸ್ತೆ, ಜೈಲು ರಸ್ತೆ ಹಾಗೂ ಬಿಜೈ ಚರ್ಚ್ ರಸ್ತೆ ಮೂಲಕ ಎಂ.ಜಿ ರಸ್ತೆಗೆ ಬರುವ ಅಡ್ಡ ರಸ್ತೆ ಹಾಗೂ ಬಂಟ್ಸ್ ಹಾಸ್ಟೆಲ್ ಮೂಲಕ ಪಿ.ವಿ.ಎಸ್ ಕಡೆಗೆ ಸಾಗುವ ಮಾರ್ಗದಲ್ಲಿ ನಿಷೇಧ.
ಕೊಟ್ಟಾರ ಚೌಕಿ, ಉರ್ವಾ ಸ್ಟೋರ್, ಕೋಟೆಕಣಿ ಕ್ರಾಸ್ನಿಂದ (ಲೇಡಿಹಿಲ್) ನಾರಾಯಣಗುರು ವೃತ್ತದ ಕಡೆಗೆ ಹೋಗುವ ಮಾರ್ಗಗಳು ನಿಷೇಧ. ಜೊತೆಗೆ ಮಣ್ಣಗುಡ್ಡ ಜಂಕ್ಷನ್ ನಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರ ನಿಷೇಧಿಸಲಾಗಿದೆ.
ಉರ್ವಾ ಮಾರ್ಕೆಟ್ ಕಡೆಯಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಸಾಗುವ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧ.
