ಕೊಪ್ಪಳ, 19 ಫೆಬ್ರವರಿ :
ಆ್ಯಂಕರ್:ಜಿಲ್ಲಾಡಳಿತದ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮವನ್ನು ಫೆಬ್ರವರಿ 20ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಗಂಗಾವತಿ ಶಾಸಕರಾದ ಗಾಲಿ ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನರಾಜ ಅವರು ಆಗಮಿಸುವರು. ಶ್ರೀ ಗವಿಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಸಿದ್ದಲಿಂಗಪ್ಪ ಕೊಟ್ನೆಕಲ್ ಅವರು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ ಅವರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ ಅವರು ತಿಳಿಸಿದ್ದಾರೆ.
