
ಬೆಂಗಳೂರು, 25 ಜನವರಿ:
ಆ್ಯಂಕರ್ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.08 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ‘ವ್ಯವಸ್ಥಿತ, ಶಿಸ್ತುಬದ್ದ, ಪರಿಣಾಮಕಾರಿ ಜನಸ್ಪಂದನೆಗೆ ಸಕಲ ತಯಾರಿಯ ಜೊತೆಗೆ ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಲು ಸಿಎಂ ಸೂಚಿಸಿದ್ದಾರೆ.
ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಕ್ಕೆ ಉಚಿತ ಬಸ್ ವ್ಯವಸ್ಥೆ
ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಲು ಸೂಚಿಸಿದ್ದು, ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪನೆ ಮಾಡಲಾಗುವುದು. ಜೊತೆಗೆ ಅಗತ್ಯವಿರುವ ಎಲ್ಲ ಉಪಕರಣಗಳನ್ನೂ ಒದಗಿಸಲು ಹಾಗೂ ಸಿಬ್ಬಂದಿಯನ್ನೂ ನಿಯೋಜಿಸಲು ಇ-ಆಡಳಿತ ಇಲಾಖೆಗೆ ಸೂಚನೆ ನಿಡಿದರು. ಮನವಿದಾರರ ದೂರುಗಳನ್ನು ಪರಿಶೀಲಿಸಿ, ನಿಗದಿತ ಕೌಂಟರುಗಳಿಗೆ ತೆರಳಲು ಸೂಕ್ತ ಮಾರ್ಗದರ್ಶನ ನೀಡಲು ಪ್ರವೇಶ ದ್ವಾರದಲ್ಲಿಯೇ ಅಧಿಕಾರಿ, ಸಿಬ್ಬಂದಿಗಳ ಫೆಸಿಲಿಟೇಷನ್ ತಂಡವನ್ನು ನಿಯೋಜಿಸುವಂತೆ ನಿರ್ದೇಶನ ನೀಡಿದರು.
