ಬೆಂಗಳೂರು,
ಆ್ಯಂಕರ್: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ಪೊಲೀಸ್ ಹಿರಿಯ ಅಧಿಕಾರಿಗಳ ನೇತೃತ್ವದ ತಂಡ ಇಂದು ಸಹ ರೌಡಿಶೀಟರ್ ಗಳ ಮನೆಗಳ ಮುಂಜಾನೆ ಹಠಾತ್ ನೆ ದಾಳಿ ಮಾಡಿದರು. ನಿನ್ನೆ 234 ಮನೆಗಳಲ್ಲಿ ತಪಾಸಣೆ ನಡೆಸಲಾಗಿದ್ದು, 177 ರೌಡಿಗಳು ಮನೆಯಲ್ಲಿರಲಿಲ್ಲ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಎಂಟು ರೌಡಿಗಳ ಮನೆಗಳಲ್ಲೂ ತಪಾಸಣೆ ನಡೆಸಲಾಗಿದೆ.
ಜಯನಗರ, ಬನಶಂಕರಿ, ಚೆನ್ನಮ್ಮನ ಅಚ್ಚುಕಟ್ಟು, ಕುಮಾರಸ್ವಾಮಿ ಲೇಔಟ್ ಸೇರಿದಂತೆ ದಕ್ಷಿಣ ವಲಯದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳ ರೌಡಿಶೀಟರ್ ಮನೆಗಳನ್ನು ಪೊಲೀಸರು ಜಾಲಾಡಿದ್ದಾರೆ. ಸುಬ್ರಹ್ಮಣ್ಯಪುರ ಉಪವಿಭಾಗದ ವ್ಯಾಪ್ತಿಯಲ್ಲಿ 125, ವಿವಿ ಪುರಂ ವ್ಯಾಪ್ತಿಯಲ್ಲಿ 76, ಜಯನಗರ ವ್ಯಾಪ್ತಿಯಲ್ಲಿ 33 ಮನೆಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.
