ಬೆಂಗಳೂರು,
ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಭಾರತದ ಕೆಲವು ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಪ್ರತ್ಯೇಕ ದಿನಗಳಂದು ಎರಡು ಸಾರ್ವಜನಿಕ ರ್ಯಾಲಿಗಳಲ್ಲಿ ಭಾಗಿಯಾಗಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಕಲ್ಬುರ್ಗಿಯಲ್ಲಿ ಮತ್ತು ಮಾರ್ಚ್ ೧೮ ರಂದು ಶಿವಮೊಗ್ಗದಲ್ಲಿ ಪ್ರಧಾನಿಯವರು ಸಾರ್ವಜನಿಕ ರ್ಯಾಲಿಗಳಲ್ಲಿ ಭಾಗಿಯಾಗುವರು .ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಬಿಜೆಪಿ ನಾಯಕರು ಮುಂದಿನ ದಿನಗಳಲ್ಲಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ . .
