ಕಾರವಾರ, 21ಅಕ್ಟೋಬರ್ :
ಆ್ಯಂಕರ್ :ಪ್ರತಿಯೊಬ್ಬ ವ್ಯಕ್ತಿಗೂ ತನ್ನ ನೆಲದ ಮಣ್ಣಿನ ಬಗ್ಗೆ ಅಭಿಮಾನ ಇರಬೇಕಾದದ್ದು ಸಹಜ. ಜಾತಿ, ಧರ್ಮದ ಹಂಗು ತೊರೆದು ಪ್ರತಿಯೊಬ್ಬ ಭಾರತೀಯರು ಒಗ್ಗಟ್ಟಾಗಿ ಸಾಗಿದರೆ ದೇಶ ಸುಭದ್ರವಾಗುವುದು ನಿಶ್ಚಿತ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಹೇಳಿದ್ದಾರೆ. ಕಾರವಾರದ ನಗರಸಭೆಯಿಂದ ಹಮ್ಮಿಕೊಂಡಿದ್ದ ‘ನನ್ನ ದೇಶ ನನ್ನ ಮಣ್ಣು’ ಮತ್ತು ‘ಅಮೃತ ಕಳಶ ಯಾತ್ರೆ’ಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಅವರು, ‘ಪ್ರಧಾನ ಮಂತ್ರಿ ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕರೆ ನೀಡಿರುವ ಈ ಅಭಿಯಾನಕ್ಕೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದಲ್ಲಿ, ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಪವಿತ್ರ ಸ್ಥಳಗಳಿಂದ ಮಣ್ಣನ್ನು ಕಳಶಗಳಲ್ಲಿ ಸಂಗ್ರಹಿಸಲಾಗಿದೆ’ ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಮಾತನಾಡಿ, ‘ದೇಶದ ಐಕ್ಯತೆ ಮತ್ತು ಸಂಸ್ಕೃತಿಯನ್ನು ವಿಶ್ವಕ್ಕೆ ತೋರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
