ರಾಯಚೂರು,
ಆ್ಯಂಕರ್ : 1973ರ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರನ್ವಯ ಮಾರ್ಚ್/ಏಪ್ರಿಲ್-2024ರ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯು ಮಾ.25-03-2024 ರಿಂದ ಏ.6ರವರೆಗೆ ರಾಯಚೂರಿನ 24, ಮಾನವಿಯ 18, ದೇವದುರ್ಗದ 15, ಲಿಂಗಸುಗೂರು-17 ಹಾಗೂ ಸಿಂಧನೂರಿನ 19 ಸೇರಿದಂತೆ ಒಟ್ಟು 93 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಆಯಾ ಪರೀಕ್ಷಾ ದಿನಾಂಕಗಳಂದು 200 ಮೀಟರ್ ಸುತ್ತುವರೆದ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಪರಿಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಸಿಬ್ಬಂದಿಗಳು ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ ಯಾರೂ ನಿಷೇಧಿತ ಪ್ರದೇಶವನ್ನು ಪ್ರವೇಶಿಸಕೂಡದು, ಪರೀಕ್ಷಾ ಕೇಂದ್ರಗಳಿಗೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಮೊಬೈಲ್ ಫೋನ್ಗಳು ಪಠ್ಯಪುಸ್ತಕಗಳನ್ನು ಹಾಗೂ ಕ್ಯಾಲ್ಕುಲೇಟರ್ಗಳನ್ನು ತರುವುದನ್ನು ನಿಷೇಧಿಸಕೂಡದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲಾ ಝರಾಕ್ಸ್ ಅಂಗಡಿಗಳನ್ನು ಹಾಗೂ ಸೈಬರ್ ಕೆಫೆಗಳನ್ನು ಪರಿಕ್ಷಾ ಸಮಯದಲ್ಲಿ ಕಡ್ಡಾಯವಾಗಿ ಮುಚ್ಚತಕ್ಕದ್ದು ಈ ಷರತ್ತುಗಳಿಗೊಳಪಟ್ಟು ನಿಷೇಧಾಜ್ಞೆ ಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಆದೇಶ ಹೊರಡಿಸಿದ್ದಾರೆ.
