ಬೆಂಗಳೂರು
ಆ್ಯಂಕರ್:ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಕೊಪ್ಪಳದಲ್ಲಿ 38.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 17.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹಳಷ್ಟು ಕಡಿಮೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ, ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ.
ಎಚ್ಎಎಲ್ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ ನಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
