ಬೆಂಗಳೂರು, 27 ಫೆಬ್ರವರಿ :ಆ್ಯಂಕರ್:
ತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಬೆಳಗ್ಗೆ 10 ಗಂಟೆ ಯಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ. ಒಟ್ಟು 4 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 223 ಶಾಸಕರು ಮತ ಚಲಾಯಿಸಲಿದ್ದಾರೆ. ಶಾಸಕರ ಸಂಖ್ಯಾಬಲದಂತೆ ನಾಲ್ಕು ಸ್ಥಾನದ ಪೈಕಿ ಕಾಂಗ್ರೆಸ್ಗೆ 3, ಬಿಜೆಪಿಗೆ 1 ಸ್ಥಾನದ ಗೆಲುವು ಸಲೀಸಾಗಲಿದೆ.
ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿಗಳು ಯಾರೆಲ್ಲ?
ಕಾಂಗ್ರೆಸ್ನಿಂದ ಅಜಯ್ ಮಕೇನ್, ಜಿ.ಸಿ ಚಂದ್ರಶೇಖರ್, ಡಾ. ಸೈಯದ್ ನಾಸೀರ್ ಹುಸೇನ್ ಕಣದಲ್ಲಿದ್ದಾರೆ.
ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳಿವರು
ಬಿಜೆಪಿಯಿಂದ ನಾರಾಯಣಸಾ ಭಾಂಡಗೆ ಸ್ಪರ್ಧೆಗಿಳಿದಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.
