ಬೆಂಗಳೂರು, 5 ಮಾರ್ಚ್
ಆ್ಯಂಕರ್:ಫೆಬ್ರವರಿ ತಿಂಗಳಲ್ಲೇ ಬಿಸಿಲಿನ ಝಳಕ್ಕೆ ಜನ ತಂಪುಪಾನೀಯದ ಮೊರೆ ಹೋಗುತ್ತಿದ್ದಾರೆ. ಚಳಿಗಾಲದಲ್ಲೇ ಹೀಗೆ ಬಿಸಿಲಿದೆ, ಇನ್ನೂ ಬೇಸಿಗೆಯಲ್ಲಿ ಹೇಗೋ ಎಂಬ ಜನರ ಮಾತಿನಂತೆ ಹವಾಮಾನ ಇಲಾಖೆ ಕೂಡ ಈ ಕುರಿತು ಎಚ್ಚರಿಕೆ ನೀಡಿದೆ.
ಕಳೆದ ವರ್ಷದ ಮಳೆಯ ಅಭಾವದ ಎಫೆಕ್ಟ್ ಇನ್ನೂ ಅನುಭವಿಸುತ್ತಿದ್ದೇವೆ. ನೀರಿಲ್ಲದೇ ಜನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿ ಬರದ ಪರಿಸ್ಥಿತಿ ಎದುರಾಗಿದೆ. ಇನ್ನೂ ಫೆಬ್ರವರಿ ತಿಂಗಳಲ್ಲೇ 34.2 ದಾಖಲೆ ಪ್ರಮಾಣದ ಉಷ್ಣಾಂಶ ರಾಜ್ಯದಲ್ಲಿ ದಾಖಲಾಗಿತ್ತು. ಈಗ ಮಾರ್ಚ್ 1ರಿಂದ ಬೇಸಿಗೆ ಶುರುವಾಗಿದ್ದು, ಮೇ ಅಂತ್ಯದವರೆಗೆ ಬಿಸಿಲು ಜನರಿಗೆ ಕಾಟ ಕೊಡಲಿದೆ.
ಪೂರ್ವ ಭಾಗದ ಸಮುದ್ರದ ನೀರಿನ ಉಷ್ಣಾಂಶ 1.5 ಗಿಂತ ಹೆಚ್ಚಾಗುವ ಸಾಧ್ಯತೆ ಇದ್ದು, ಇದನ್ನು ಏಲಿನೋ ಎಂದು ಕರೆಯುತ್ತಾರೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಮೂರು ತಿಂಗಳು ವಾಡಿಕೆಗಿಂತ 70% ಹೆಚ್ಚು ಉಷ್ಣತೆ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಡೀ ರಾಜ್ಯದಲ್ಲೇ ವಾಡಿಕೆಗಿಂತ ಹೆಚ್ಚಿನ ತಾಪಮಾನ ಮುಂದಿನ ಮೂರು ತಿಂಗಳಲ್ಲಿ ಕಾಣಬಹುದಾಗಿದೆ. ಅದೇ ರೀತಿ ಮಾರ್ಚ್ನಿಂದ ಮೇ ವೇಳೆಯಲ್ಲಿ ವಾಡಿಕೆಗಿಂತ 70% ರಷ್ಟು ಮಳೆಯಾಗುವ ಸಾಧ್ಯತೆ ಕೂಡ ಇದೆ.
