
ಕಲಬುರಗಿ, 27 ಜನವರಿ :
ಆ್ಯಂಕರ್: ನಗರದ ಐವಾನ್-ಎ-ಶಾಹಿ ರಸ್ತೆಯಲ್ಲಿರುವ (ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಹತ್ತಿರ) ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸೇಠ್ ಶಂಕರಲಾಲ್ ಲಾಹೋಟಿ ಲಾ ಕಾಲೇಜಿನಲ್ಲಿ ಶನಿವಾರ ಕಾನೂನು ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭವು ಸಡಗರ ಸಂಭ್ರಮದಿಂದ ನಡೆಯಿತು.
ಕಲಬುರಗಿ ಜಿಲ್ಲೆಯ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಗುಪ್ತಲಿಂಗ ಪಾಟೀಲ್ ರವರು ಹಾಗೂ ಕಾಲೇಜಿನ ಪ್ರಾಂಶುಪಾಲರಾಗಿರುವ ಡಾ. ಸವಿತಾ ಆರ್ ಗಿರಿರವರು ಸಸಿಗೆ ನೀರೆರೆಯುವ ಮೂಲಕ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಶಾಂತೇಶ್ವರಿ ಶಾಂತಗೀರಿ, ಮಹೇಶ್ವರಿ ಹೀರೆಮಠ, ಜ್ಯೋತಿ ಕಡಾಡಿ, ಕರುಣಾ ಪಾಟೀಲ್, ರೇಣುಕಾ ದೇವರಮನಿ, ಜ್ಯೋತಿ ಹಂಗರಗಿರವರು ಸೇರಿದಂತೆ ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
