ರಾಯಚೂರು, 6 ಫೆಬ್ರವರಿ :
ಆ್ಯಂಕರ್ : ಫೆ.16ರಂದು ಸವಿತಾ ಮಹರ್ಷಿ ಜಯಂತಿಯನ್ನು ಜಿಲ್ಲಾಡಳಿತದಿಂದ ಹಾಗೂ ಸಮಾಜದ ಸಂಯುಕ್ತಾಶ್ರಯದಲ್ಲಿ ಆಚರಿಸಲಾಗುತ್ತಿದ್ದು, ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅವರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸವಿತಾ ಮಹರ್ಷಿ ಜಯಂತಿಯಂಗವಾಗಿ ಫೆ.16ರ ಬೆಳಿಗ್ಗೆ 9:00 ಗಂಟೆಗೆ ಗಾಂದಿ ವೃತ್ತದ ಹತ್ತಿರದ ಸವಿತಾ ಮಹರ್ಷಿ ವೃತ್ತದಿಂದ ಸವಿತಾ ಮಹರ್ಷಿ ಅವರ ಭಾವಚಿತ್ರವನ್ನು ಮೆರವಣಿಗೆ ಮೂಲಕ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರವರೆಗೆ ಆಗಮಿಸಿ ಬೆಳಿಗ್ಗೆ 11:00 ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಸರಿಯಾದ ರೀತಿಯಲ್ಲಿ ವ್ಯವಸ್ಥಿತವಾಗಿ ಮಾಡಿಕೊಳ್ಳಬೇಕು. ಸವಿತಾ ಮಹರ್ಷಿ ಅವರ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲು ಮತ್ತು ಕಡ್ಡಾಯವಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಮತ್ತು ತಾಲೂಕಾ ಹಾಗೂ ಜಿಲ್ಲಾ ಮಟ್ಟದಲ್ಲಿ ಜಯಂತಿಯನ್ನು ಆಚರಣೆ ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ.ವೆಂ ನಾಯಕ, ನಗರಸಭೆ ಅಧಿಕಾರಿ ಶಕೀಲ್, ಶಿಕ್ಷಣ ಇಲಾಖೆಯ ಅಧಿಕಾರಿ ಪರಶುರಾಮ, ಸಮಾಜದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
