ಬೆಂಗಳೂರು, 23ಅಕ್ಟೋಬರ್ :
ಆ್ಯಂಕರ್ :ಕರ್ನಾಟಕದಾದ್ಯಂತ ಗರಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆ ಕಾಣುತ್ತಿದೆ. ಜತೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಮಂಗಳೂರು, ಸುಳ್ಯ, ಉಪ್ಪಿನಂಗಡಿ, ಪಣಂಬೂರು, ಮಾಲೂರು, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಶಿರಾಲಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ವಿಜಯಪುರದಲ್ಲಿ 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಕಲಬುರ್ಗಿ, ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
