ರಾಯಚೂರು,
ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯಿಂದ 10 ರಿಂದ 17 ವಯೋಮಿತಿಯ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರವನ್ನು ಏಪ್ರೀಲ್ ಮತ್ತು ಮೇ 2024 ರ ಮಾಹೆಗಳಲ್ಲಿ ಆಯೋಜಿಸಲಾಗುತ್ತಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಆಸಕ್ತ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಈ ಸಾಹಸಮಯ ಬೇಸಿಗೆ ತರಬೇತಿ ಶಿಬಿರದ ಕುರಿತು ಹೆಚ್ಚಿನ ಮಾಹಿತಿಯನ್ನು ಉಇಖಿಊಓಂಂ.ಔಖಉ ವೆಬ್ಸೈಟ್ ಮೂಲಕ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ರಾಯಚೂರು ಇಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದವರು ತಿಳಿಸಿದ್ದಾರೆ.
