ಆ್ಯಂಕರ್: ಉಜ್ಬೇಕಿಸ್ತಾನ ಮೂಲದ ವಿದೇಶಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಬೆಂಗಳೂರಿನ ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜರೀನಾ ಮೃತ ಮಹಿಳೆ. ನಾಲ್ಕು ದಿನದ ಹಿಂದೆ ನಗರಕ್ಕೆ ಬಂದಿದ್ದ ವಿದೇಶಿ ಮಹಿಳೆ ಬಿಡಿಎ ಸೇತುವೆ ಬಳಿಯ ಖಾಸಗಿ ಸ್ಟಾರ್ ಹೋಟೆಲ್ ನ ಸೆಕೆಂಡ್ ಪ್ಲೋರ್ ನ ಕೊಠಡಿಯೊಂದರಲ್ಲಿ ಮೃತಪಟ್ಟಿದ್ದಾರೆ. ಮೃತ ಜರೀನಾ ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಆಗಮಿಸಿದ್ದರು. ನಿನ್ನೆ ಸಂಜೆ ಹೋಟೆಲ್ ಸಿಬ್ಬಂದಿ ಎಷ್ಟೇ ಕೂಗಿದ್ರು ಮಹಿಳೆ ಬಂದಿರಲಿಲ್ಲ. ಹೀಗಾಗಿ ಇಂದು ಮಧ್ಯರಾತ್ರಿ ಮಾಸ್ಟರ್ ಕೀ ಮೂಲಕ ಬಾಗಿಲು ತೆಗೆದಾಗ ಮಹಿಳೆ ಶವಪತ್ತೆಯಾಗಿದೆ.
ಕೊಲೆಯಾಗಿರುವ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು, ಎಫ್ಎಸ್ಎಲ್ ತಂಡ ಹಾಗೂ ಡಾಗ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಸಿಎಆರ್ಡಿಸಿಪಿ ಅರುಣಾಂಶು, ಕೇಂದ್ರ ವಿಭಾಗ ಡಿಸಿಪಿ ಶೇಖರ್ ಟೆಕ್ಕಣ್ಣನವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಆರೋಪಿ ಉಸಿರುಗಟ್ಟಿಸಿ ಮಹಿಳೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಹೋಟೆಲ್ ಸಿಸಿಟಿವಿ ಹಾಗೂ ಲೆಡ್ಜರ್ ಬುಕ್ ಪರಿಶೀಲಿಸಲಾಗುತ್ತಿದೆ. ಯಾರೆಲ್ಲ ಹೋಟೆಲ್ಗೆ ಬಂದು ಹೋಗಿದ್ದಾರೆ ಎಂಬುದರ ಪರಿಶೀಲನೆ ನಡೆಯುತ್ತಿದೆ. ಸದ್ಯ ಸ್ಥಳದಲ್ಲಿ ಎಫ್ಎಸ್ಎಲ್ ಪರಿಶೀಲನೆ ಮುಕ್ತಾಯವಾಗಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹ ಬೋರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
