
ಬೆಂಗಳೂರು, 6 ಫೆಬ್ರವರಿ :
ಆ್ಯಂಕರ್ :
ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳಲ್ಲಿ ಸೆಕೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆದಿದೆ.
ಚಾಮರಾಜನಗರದಲ್ಲಿ 14.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
