ಬೆಂಗಳೂರು:
ಆ್ಯಂಕರ್: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಜತೆಗಿನ ಬಿಜೆಪಿ ನಾಯಕರ ಸಂಧಾನ ಯಶಸ್ವಿಯಾಗಿದೆ. ನಿನ್ನೆ(ಮಾರ್ಚ್ 14) ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಂಧಾನ ಸಭೆ ನಡೆದಿದ್ದು, ಅರುಣ್ ಪುತ್ತಿಲ ಅವರನ್ನು ಮನವೊಲಿಸುವಲ್ಲಿ ಬಿಜೆಪಿ ನಾಯಕರು ಕೊನೆಗೂ ಯಶಸ್ವಿಯಾಗಿದ್ದು, ಇಂದು (ಮಾರ್ಚ್ 15) ಅರುಣ್ ಪುತ್ತಿಲ ಅವರು ಮಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಆನೆ ಬಲಬಂದಂತಾಗಿದೆ.
ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಪುತ್ತಿಲರ ಜೊತೆಗಿನ ಸಂಧಾನ ಯಶಸ್ವಿಯಾಗಿದ್ದು, ಇದೀಗ ಬಿಜೆಪಿಗೆ ಮರುಸೇರ್ಪಡೆಯಾಗಲು ಪುತ್ತಿಲ ಒಪ್ಪಿಗೆ ನೀಡಿದ್ದಾರೆ. ಇದರೊಂದಿಗೆ ಕಳೆದ ವಿಧಾನಸಭಾ ಚುನಾವಣೆಯಿಂದ ಆರಂಭಗೊಂಡಿದ್ದ ಬಿಜೆಪಿ-ಪುತ್ತಿಲರ ನಡುವಿನ ಸಂಘರ್ಷ ಅಂತ್ಯವಾದಂತಾಗಿದೆ.
